- ಈ ವಿದ್ಯಾರ್ಥಿ ವೇತನ ಯಾವ ತರಗತಿಯವರಿಗ ದೊರೆಯುತ್ತದೆ.
- ವಿದ್ಯಾರ್ಥಿವೇತನದ ಮೊತ್ತ ಎಷ್ಟು ಹಾಗೂ ,
- ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ.
- ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಸರ್ಕಾರಿ ಸೌಲಭ್ಯಗಳ ಮಾಹಿತಿಗಾಗಿ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಕೂಡಲೇ ಜಾಯಿನ್ ಆಗಿ.
ಸರ್ಕಾರಿ ಅಥವಾ ಖಾಸಗಿ ಅನುದಾನಿತ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಸಿಗದಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಹಣಕಾಸಿನ ಸಹಾಯ ಒದಗಿಸಲು ವಿದ್ಯಾಸಿರಿ ಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳಿಗೆ 1,200/- ರಂತೆ ಶೈಕ್ಷಣಿಕ ಅವಧಿಯ 10 ತಿಂಗಳಿಗೆ ಒಟ್ಟು ರೂ 15,000/- ಸಹಾಯಧನವನ್ನು (2022 ರಿಂದ ಮಾರ್ಚ್ 2023ರ ) ವರೆಗೆ ಅವರ ಬ್ಯಾಂಕ್ ಖಾತೆಗೆ ಆನ್ಲೈನ್ ಮೂಲಕ ಜಮಾ ಮಾಡಲಾಗುತ್ತದೆ ಹಾಗೂ ಶುಲ್ಕ ವಿನಾಯಿತಿ ವಿದ್ಯಾರ್ಥಿವೇತನದ ಅಡಿಯಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಾಲಾ ಮತ್ತು ಕಾಲೇಜಿಗೆ ಕಟ್ಟಿದ ಶುಲ್ಕಗಳನ್ನು ಮರುಪಾವತಿ ಮಾಡಲಾಗುತ್ತದೆ
ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ ಆಗಿದ್ದು ನೀವು 28 ಫೆಬ್ರವರಿ 2023 ರ ವರೆಗೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದುವರೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಿಲ್ಲವೋ ಅವರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು ಹೆಚ್ಚಿನ ಮಾಹಿತಿಯನ್ನು ಕೆಳಗಡೆ ಕೊಡಲಾಗಿದೆ ಒಂದು ಸಾರಿ ಸಂಪೂರ್ಣವಾಗಿ ಓದಿ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾಸಿರಿ ವಿದ್ಯಾರ್ಥಿ ವೇತನದ ವಿವರಗಳು...
ಈ ಯೋಜನೆಯಡಿ ಅಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ 1,500/- ರಂತೆ ಶೈಕ್ಷಣಿಕ ಅವಧಿಯಲ್ಲಿ ಪ್ರತಿವರ್ಷ 10 ತಿಂಗಳಿಗೆ ಒಟ್ಟು ರೂ 15,000/- ಸಹಾಯಧನವನ್ನು ನೀಡಲಾಗುತ್ತದೆ. ಈಗ ಈ ಸಹಾಯಧನವನ್ನು ವಿದ್ಯಾರ್ಥಿಗಳು ಯಾವುದಾದರೂ ಒಂದು ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕಿನಲ್ಲಿ ತೆರೆದಿರುವ ಬ್ಯಾಂಕ್ ಖಾತೆಗೆ ಆನ್ಲೈನ್ ಮೂಲಕ ( ಡಿ ಬಿ ಟಿ ) ಮುಖಾಂತರ ಸಹಾಯಧನವನ್ನು ಜಮಾ ಮಾಡಲಾಗುತ್ತದೆ.
ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಇರಬೇಕಾದ ಅರ್ಹತೆಗಳು...
- ಭಾರತದ ಪ್ರಜೆಯಾಗಿರಬೇಕು ಮತ್ತು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಅಭ್ಯರ್ಥಿಯು ಹಿಂದುಳಿದ ವರ್ಗದ ವರ್ಗಕ್ಕೆ ಸೇರಿರಬೇಕು ಮತ್ತು ಪುರಾವೆಯಾಗಿ ಮಾನ್ಯವಾದ ಜಾತಿ ಪ್ರಮಾಣ ಪತ್ರವನ್ನು ಹೊಂದಿರಬೇಕು, ಅದಲ್ಲದೆ SC / ST , OBC , EBC ಇಂತಹ ಮೀಸಲು ವರ್ಗಕ್ಕೆ ಸೇರಿದವರಾಗಿರಬೇಕು.
- 3ಎ ಮತ್ತು 3ಬಿ, OBC, EBC ಯೋಜನೆಯಡಿಯಲ್ಲಿ ಅಭ್ಯರ್ಥಿಗಳ ವಾರ್ಷಿಕ ಕುಟುಂಬ ಆದಾಯವು ಎಲ್ಲಾ ಮೂಲಗಳಿಂದ ( ಒಂದು ) 1 ಲಕ್ಷ ಮೀರಿರಬಾರದು, ಪ್ರವರ್ಗ ಒಂದರ ವಿದ್ಯಾರ್ಥಿಗಳಿಗೆ ಆದಾಯವು ಎಲ್ಲಾ ಮೂಲಗಳಿಂದ 2.5 ಲಕ್ಷ ಮೀರಿರಬಾರದು.
- ಕರ್ನಾಟಕದಲ್ಲಿ ಕನಿಷ್ಠ ಏಳು ವರ್ಷ ಓದಿರಬೇಕು ಕಾಲೇಜಿನಲ್ಲಿ ಕನಿಷ್ಠ 75% ಹಾಜರಾತಿ ಹೊಂದಿರಬೇಕು
- ಕರ್ನಾಟಕದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ ಸ್ಥಳೀಯ ಸಂಸ್ಥೆ ಅನುದಾನಿತ ಸಂಸ್ಥೆಗಳು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳು ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು
- ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಇವುಗಳಲ್ಲಿ ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರಿರುತ್ತಾರೆ
- ಯಾವುದೇ ಇಲಾಖೆಯ ಸರ್ಕಾರಿ ಸರ್ಕಾರಿ ಅನುದಾನಿತ ವಿದ್ಯಾರ್ಥಿ ನಿಲಯ ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದ ಹಾಗೂ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಊಟ ಮತ್ತು ವಸತಿ ಕಾರ್ಯಕ್ರಮದಲ್ಲಿ ಮಂಜೂರಾತಿ ನೀಡಲಾಗುತ್ತದೆ
- ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ಹಾಗೂ ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5 km ದೂರದವರಾಗಿರಬೇಕು ಆದರೆ ವಿದ್ಯಾರ್ಥಿಯ ಸ್ವಂತ ಸ್ಥಳ ನಗರ ಪಟ್ಟಣ ಆಗಿದ್ದು ಅವರು ಬೇರೆ ನಗರ ಪಟ್ಟಣದಲ್ಲಿ ಇರುವ ಕಾಲೇಜು ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತವರು ಕೂಡ ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ
- ಸಮಾನಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತವರು ಅರ್ಹರಿರುವುದಿಲ್ಲ ಉದಾಹರಣೆಗೆ, ಬಿಎ ನಂತರ ಬಿಕಾಂ ಎಂಎ ನಂತರ ಎಂಎಡ್ ನಂತರ ಎಲ್ ಎಲ್ ಬಿ ಇತ್ಯಾದಿಗಳಿಗೆ ಪ್ರವೇಶ ಪಡೆದಿದ್ದಲ್ಲಿ
ಈ ಯೋಜನೆಯಲ್ಲಿ ವಿದ್ಯಾರ್ಥಿಗಳಿಗೆ ದೊರೆಯುವ ಸಹಾಯಧನ ಎಷ್ಟು...
ಈ ಯೋಜನೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ 1,500 ರಂತೆ ಶೈಕ್ಷಣಿಕ ಅವಧಿಯಲ್ಲಿ ಪ್ರತಿವರ್ಷ 10 ತಿಂಗಳಿಗೆ ಒಟ್ಟು ರೂ 15,000 ಸಹಾಯಧನವನ್ನು ಇತರೆ ನಿಬಂಧನೆಗಳುಪಟ್ಟು ವಿದ್ಯಾರ್ಥಿಗಳು ಯಾವುದಾದರೂ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕಿನಲ್ಲಿ ತೆರೆದಿರುವ ಬ್ಯಾಂಕ್ ಖಾತೆಗೆ ಆನ್ಲೈನ್ ಮೂಲಕ ಜಮಾ ಮಾಡಲಾಗುತ್ತದೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು...
- ಎಸ್ ಎಸ್ ಎಲ್ ಸಿ ಅಂಕಪಟ್ಟಿ
- ಪಿಯುಸಿ ಅಥವಾ ಪದವಿ ಸೆಮಿಸ್ಟರ್ ಅಂಕಪಟ್ಟಿ
- ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಪ್ರತಿ ಜಾತಿ ಪ್ರಮಾಣ ಪತ್ರ ಪಾಸ್ಪೋರ್ಟ್ ಅಳತೆ ಭಾವಚಿತ್ರ ಶಾಲಾ ಶುಲ್ಕದರಶೀದಿ ನಿವಾಸಿ ದಢೀಕರಣ ಪತ್ರ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಫೆಬ್ರವರಿ 2023
ಅರ್ಜಿ ಸಲ್ಲಿಸುವ ವಿಧಾನ...
ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾದವರು ಆನ್ಲೈನ್ ಮೂಲಕ ಯಶಸ್ವಿ ತಂತ್ರಾಂಶದಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಹಂತ - 1
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ ಯಶಸ್ವಿ ಕರ್ನಾಟಕ ಜಿಒ ವಿ ಡಾಟ್ ಇನ್ ಗೆ ಭೇಟಿ ನೀಡ ಬೇಕು ಬೇಕು
ಹಂತ - 2
ಹೋಂ ಪೇಜ್ ನಲ್ಲಿ ಲಭ್ಯವಿರುವ ಖಾತೆಯನ್ನು ರಚಿಸುವ ಆಯ್ಕೆ ಮೇಲೆ ಕ್ಲಿಕ್ ಮಾಡಿ
ಹಂತ - 2
ನಿಮ್ಮ ಆಧಾರ್ ಸಂಖ್ಯೆ ಮತ್ತು ನಿಮ್ಮ ಹೆಸರು ಆಧಾರ್ ನಲ್ಲಿರುವಂತೆ ನಮೂದಿಸಿ ಲಿಂಗವನ್ನು ಆಯ್ಕೆ ಮಾಡಿ ಕ್ಯಾಪ್ಚ ಕೊಡಲು ನಮೂದಿಸಿ ಅರ್ಜಿಯನ್ನು ಮುಂದುವರಿಸಬೇಕು
ಹಂತ - 4
ನಿಮ್ಮ ಪಾಲಕ ಅಥವಾ ಪೋಷಕರ ಆಧಾರ್ ಸಂಖ್ಯೆಯನ್ನು ನಮೂದಿಸಿ ಮೊಬೈಲ್ ನಂಬರ್ ಅನ್ನು ಭರ್ತಿ ಮಾಡಿ ಮತ್ತು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು ನಂತರ ನೀವು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಓಟಿಪಿಯನ್ನು ಪಡೆಯುತ್ತೀರಿ
ಹಂತ - 5
ನಂತರ ಅರ್ಜಿದಾರರು ಬಳಕೆದಾರರ ಮತ್ತು ಪಾಸ್ವರ್ಡ್ ಅನ್ನು ಪಡೆಯುತ್ತೀರಿ ಅದನ್ನು ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ ಈ ಬಳಕೆದಾದರ ಐಡಿ ಮತ್ತು ಪಾಸ್ವರ್ಡ್ ಮುಖಾಂತರ ಯಶಸ್ವಿ ವೆಬ್ಸೈಟ್ ಅನ್ನು ಲಾಗಿನ್ ಮಾಡಬೇಕು
ಕರ್ನಾಟಕದಲ್ಲಿ SSP ವೆಬ್ಸೈಟ್ ಗೆ ಲಾಗಿನ್ ಮಾಡುವುದು ಹೇಗೆ...
ಅರ್ಜಿದಾರರು ಪಡೆದುಕೊಂಡಿರುವ ಬಳಕೆದಾರರ ಅಡಿ ಮತ್ತು ಪಾಸ್ವರ್ಡ್ ನೊಂದಿಗೆ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಮಾಡಬಹುದು ನಂತರ ವಿದ್ಯಾರ್ಥಿ ಖಾತೆಯ ಮುಖಪುಟಕ್ಕೆ ಪ್ರವೇಶ ಪಡೆಯುತ್ತೀರಿ ಆ ಮುಖಪುಟದಲ್ಲಿ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ವಿವರಗಳಬೇಕಾಗುತ್ತದೆ ಎಲ್ಲಾ ಅಗತ್ಯ ವಿವರಗಳನ್ನು ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು ಸಲ್ಲಿಸಿದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಅದನ್ನು ಶಾಲಾ ಅದನ್ನು ಸ್ವೀಕೃತಿ ಚೀಟಿಯೊಂದಿಗೆ ಶಾಲೆ ಅಥವಾ ಕಾಲೇಜಿಗೆ ಸಲ್ಲಿಸಬೇಕು.
ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿವೇತನದ ಸ್ಥಿತಿಯನ್ನು ಪರಿಶೀಲಿಸುವುದು ಹೇಗೆ...
ಹಂತ - 1
ಹಂತ 2:
ಉಪಯುಕ್ತವಾಗುವ ಲಿಂಕ್ ಗಳು
index | links |
---|---|
ಆನ್ಲೈನ್ ಅರ್ಜಿ ಸಲ್ಲಿಸಲು | Click here |
ನಮ್ಮ ವಾಟ್ಸಾಪ್ ಗ್ರುಪ್ ಸೇರಲು | Click here |
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಲು | Click here |
ಡೌನ್ಲೋಡ್ ಸೆಕ್ಷನ್ ಗೆ ಹೋಗಲು | Click here |