Join our WhatsApp group Click here

New Update for Labour card Holders || ರಾಜ್ಯ ಕಾರ್ಮಿಕ ಇಲಾಖೆ ವತಿಯಿಂದ ನಕಲಿ ಕಾರ್ಡ್ ರದ್ದತಿ ಅಭಿಯಾನ?

New Update for Labour card Holder...

 ರಾಜ್ಯ ಕಾರ್ಮಿಕ ಇಲಾಖೆ ವತಿಯಿಂದ ನಕಲಿ ಕಾರ್ಡ್ ರದ್ದತಿ ಅಭಿಯಾನ?

ಬೆಂಗಳೂರು: ಅನರ್ಹರು ಕಾರ್ಮಿಕರ ಗುರುತಿನ ಚೀಟಿ ಪಡೆಯುತ್ತಿದ್ದು, ಅರ್ಹರು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ನಕಲಿ ಕಾರ್ಮಿಕ ಕಾರ್ಡ್‌ ರದ್ದತಿ ಅಭಿಯಾನ ಶುರು ಮಾಡಿದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಸಾವಿರಾರು ಜನ ನಕಲಿ ಕಾರ್ಮಿಕ ಕಾರ್ಡ್ ಪಡೆದು ಬಡ ಕಾರ್ಮಿಕರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇಂತಹ ಅನರ್ಹರು ಪಡೆದಿರುವ ಗುರುತಿನ ಚೀಟಿ ನೋಂದಣಿಯನ್ನು ರದ್ದುಪಡಿಸುವುದು ಮಾತ್ರವಲ್ಲ, ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ ಎನ್ನಲಾಗುತ್ತಿದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರು ನಕಲಿ ದಾಖಲಾತಿ ಸೃಷ್ಟಿಸಿ ಇಲಾಖೆ ನೀಡುವ ಕಾರ್ಮಿಕರ ಗುರುತಿನ ಚೀಟಿ ಪಡೆದು ಸೌಲಭ್ಯಗಳನ್ನು ಪಡೆಯುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸಿರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಅನರ್ಹ ಫಲಾನುಭವಿಗಳ ಕಾರ್ಮಿಕ ಕಾರ್ಡ್ ರದ್ದತಿ ಅಭಿಯಾನ ಕೈಗೊಂಡಿದೆ. ಬುಧವಾರ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಈ ಅಭಿಯಾನ ಮುಂದಿನ ಒಂದು ತಿಂಗಳ ಕಾಲ ನಡೆಯಲಿದೆ ಎನ್ನಲಾಗುತ್ತಿದೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕ ಕಾರ್ಡ್‌ಗಳನ್ನು ಕಟ್ಟಡ ಕಾರ್ಮಿಕರು ಮತ್ತು ಸಂಬಂಧಿತ ಕೈಗಾರಿಕೆಗಳಲ್ಲಿ ಕೆಲಸ ಮಾಡುವವರಿಗೆ ಮಾತ್ರ ನೀಡಲಾಗುತ್ತದೆ. ವಸತಿ, ವಾಣಿಜ್ಯ ಮತ್ತು ಸರ್ಕಾರಿ ಸೇರಿದಂತೆ ಎಲ್ಲಾ ನಿರ್ಮಾಣ ಯೋಜನೆಗಳಿಗೆ ಶೇ. 1ರಷ್ಟು ಸೆಸ್ ವಿಧಿಸಲಾಗುತ್ತದೆ. ಇದರಿಂದ ಪ್ರತಿ ವರ್ಷ 800 ರಿಂದ 1,000 ಕೋಟಿ ರೂ.ವರೆಗೆ ಸಂಗ್ರಹವಾಗುತ್ತದೆ. ಈ ಹಣವನ್ನು ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮಾತ್ರ ಬಳಸಲಾಗುತ್ತದೆ.

ರಾಜ್ಯವು 40 ಲಕ್ಷ ನೋಂದಾಯಿತ ಸದಸ್ಯರನ್ನು ಹೊಂದಿದ್ದು, ಅವರು ಆರೋಗ್ಯ, ಶಿಕ್ಷಣ, ವಸತಿ, ಪಿಂಚಣಿ ಸೇರಿದಂತೆ ವಿವಿಧ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಆಧಾರ್ ಮತ್ತು ಲೇಬರ್ ಕಾರ್ಡ್‌ನಿಂದ ಸಕ್ರಿಯಗೊಳಿಸಲಾದ ನೇರ ಲಾಭ ವರ್ಗಾವಣೆಯ ಮೂಲಕ ಫಲಾನುಭವಿಗಳಿಗೆ ಹಣವನ್ನು ವರ್ಗಾಯಿಸಲಾಗುತ್ತಿದೆ. ಆದರೆ ಅರ್ಹತೆ ಇಲ್ಲದ ಹೆಚ್ಚಿನ ಸಂಖ್ಯೆಯ ಜನರು ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇದನ್ನು ತಡೆಯಲು ನಾವು ಅಭಿಯಾನ ಆರಂಭಿಸಲಾಗಿದೆ ಎನ್ನಲಾಗುತ್ತಿದೆ.

ಪ್ರತಿ ತಾಲೂಕಿನಲ್ಲಿ ಅಧಿಕಾರಿಗಳ ತಂಡಗಳು ಕಾರ್ಮಿಕ ಕಾರ್ಡ್‌ಗಳು ಮತ್ತು ಫಲಾನುಭವಿಗಳನ್ನು ಯಾದೃಚ್ಛಿಕವಾಗಿ ಪರಿಶೀಲನೆ ನಡೆಸಲಿದ್ದಾರೆ.

ಕಟ್ಟಡ ನಿರ್ಮಾಣ ಮತ್ತು ಸಂಬಂಧಿತ ಉದ್ಯಮಗಳಲ್ಲದ ಗಾರ್ಮೆಂಟ್ಸ್ ಕಾರ್ಮಿಕರು, ಇತರರು ಕೂಡ ಲೇಬ‌ ಕಾರ್ಡ್‌ಗಳನ್ನು ಹೊಂದಿದ್ದಾರೆ ಎಂಬ ಮಾಹಿತಿ ಇದೆ. ಕಾಡ್ ೯ಗೆ ಅರ್ಹತೆ ಪಡೆಯಲು ಒಬ್ಬರು ನಿರ್ಮಾಣ ಉದ್ಯಮದಲ್ಲಿ ಆರ್ಥಿಕ ವರ್ಷದಲ್ಲಿ ಕನಿಷ್ಠ 90 ದಿನಗಳ ಕಾಲ ಕೆಲಸ ಮಾಡಬೇಕು. ಆದರೆ, ಕೆಲ ವ್ಯಕ್ತಿಗಳು ಕಟ್ಟಡ ಕಾರ್ಮಿಕರು ಎಂದು ಹೇಳಿಕೊಂಡು ನಕಲಿ ಕೆಲಸದ ಅನುಭವದ ದಾಖಲೆಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.


Post a Comment

AdBlock Detected!
We have detected that you are using adblocking plugin in your browser.
The revenue we earn by the advertisements is used to manage this website, we request you to whitelist our website in your adblocking plugin.
Site is Blocked
Sorry! This site is not available in your country.